ನೇತ್ರಾವತಿ ನದಿಯಲ್ಲಿ ಗುರುತು ಪತ್ತೆ ಹಚ್ಚಲಾಗದ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ದಕ್ಷಿಣ ಕನ್ನಡ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಂಭೂರು ಎ.ಎಂ.ಆರ್. ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ.
ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದನ್ನು ಗಮನಿಸಿದ ಎ.ಎಂ.ಆರ್. ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು ಈ ಶವ ಸಂಪೂರ್ಣ ಕೊಳೆತು ಹೋಗಿದ್ದು ಸುಮಾರು 15 ದಿನಗಳ ಹಿಂದೆ ನದಿಗೆ ಬಿದ್ದಿರುವ ಬಗ್ಗೆ ಸಂಶಯವಿದೆ. ಮೃತ ವ್ಯಕ್ತಿ ಪುರುಷ ಅಥವಾ ಮಹಿಳೆಯ ಎಂಬುದನ್ನು ಗುರುತು ಹಿಡಿಯಲು ಅಸಾಧ್ಯವಾದ ಪರಿಸ್ಥಿತಿ ಇದ್ದು, ಕೈಯಲ್ಲಿ ಫ್ಯಾನ್ಸಿಯ ಬ್ರಾಸ್ಲೆಟ್ ಇದೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಶವವನ್ನು ಸಂಬಂಧಿಕರು ಗುರುತು ಪತ್ತೆ ಮಾಡುವವರೆಗೆ ಸಂರಕ್ಷಿಸುವ ದೃಷ್ಟಿಯಿಂದ ಬಂಟ್ವಾಳ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw