ಗಣಿ ಅಧಿಕಾರಿ ಪ್ರತಿಮಾ ಹತ್ಯೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಕುಟುಂಬಸ್ಥರಿಂದ ಒತ್ತಾಯ
06/11/2023
ಶಿವಮೊಗ್ಗ: ಕಾರು ಡ್ರೈವರ್ ನ ಸೇಡಿಗೆ ಬರ್ಬರವಾಗಿ ಹತ್ಯೆಯಾದ ಗಣಿ ಅಧಿಕಾರಿ ಪ್ರತಿಮಾ ಅವರ ಅಂತ್ಯಕ್ರಿಯೆ ನೆರವೇರಿದೆ. ಪ್ರತಿಮಾ ಅವರಿಗೆ ಕುಟುಂಬಸ್ಥರು ಕಣ್ಣೀರಿನ ವಿದಾಯ ಹೇಳಿದ್ದಾರೆ.
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನಾದರೂ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಕೊಡಿ ಎಂದು ಕುಟುಂಬಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಿನ್ನೆ ಬೆಂಗಳೂರಿನ ಮನೆಯಲ್ಲಿ ಸರ್ಕಾರಿ ಅಧಿಕಾರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಕೆಲಸದಿಂದ ವಜಾಗೊಂಡಿದ್ದ ಪ್ರತಿಮಾ ಅವರ ಮಾಜಿ ಡ್ರೈವರ್ ನನ್ನು ಚಾಮರಾಜನಗರದಲ್ಲಿ ಬಂಧಿಸಲಾಗಿದೆ. ಆರೋಪಿ ತಾನೇ ಕೊಲೆ ನಡೆಸಿರೋದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.