ಟೈಗರ್ಸ್ ಕಲ್ಲೇಗ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ
07/11/2023
ದಕ್ಷಿಣ ಕನ್ನಡ: ಟೈಗರ್ಸ್ ಕಲ್ಲೇಗ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ತಡರಾತ್ರಿ ಪುತ್ತೂರು ತಾಲೂಕಿನ ನೆಹರೂ ನಗರ ಜಂಕ್ಷನ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಬಳಿಕ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಪುತ್ತೂರಿನ ಬನ್ನೂರು ನಿವಾಸಿ ಚೇತನ್ ಹಾಗೂ ದಾರಂದಕುಕ್ಕು ನಿವಾಸಿ ಮನೀಶ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಹತ್ಯೆ ನಡೆಸಿದ ತಂಡ ಹಾಗೂ ಅಕ್ಷಯ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಸವಾಲು ಹಾಕಲಾಗಿದೆ. ರಾತ್ರಿ 11:30ರ ವೇಳೆಗೆ ಅಕ್ಷಯ್ ನ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ವಿವರಗಳು ಪೊಲೀಸರ ತನಿಖೆಯ ಬಳಿಕ ತಿಳಿದುಬರಬೇಕಿದೆ.