ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ: ಮುರುಘಾಶ್ರೀಗೆ ಜಾಮೀನು ಮಂಜೂರು
08/11/2023
ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು ಲಕ್ಷ ರೂ. ವೈಯಕ್ತಿ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷಿಗಳನ್ನು ಸಂಪರ್ಕಿಸಬಾರದು ಹಾಗೂ ಅವರನ್ನು ಬೆದರಿಸಬಾರದು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ಜಾಮೀನು ಮಂಜೂರಾತಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು.
ನ್ಯಾಯಾಲಯದ ವಿಧಿಸಿದ ಯಾವುದೇ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ ಎಂದು ಹೈಕೋರ್ಟ್ ಆದೇಶ. ಮತ್ತೊಂದು ಕ್ರಿಮಿನಲ್ ಪ್ರಕರಣ ಬಾಕಿಯಿರುವ ಕಾರಣ ಜಾಮೀನು ಮಂಜೂರಾದರೂ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎಂದಿದೆ.