ಬಿಜೆಪಿ ರಾಜ್ಯಾಧ್ಯಕ್ಷದ ಸ್ಥಾನ: ಬೇರೆಯವರಿಗೆ ನಿರಾಸೆ ಸಹಜ: ಶ್ರೀರಾಮುಲು - Mahanayaka
11:16 AM Saturday 14 - December 2024

ಬಿಜೆಪಿ ರಾಜ್ಯಾಧ್ಯಕ್ಷದ ಸ್ಥಾನ: ಬೇರೆಯವರಿಗೆ ನಿರಾಸೆ ಸಹಜ: ಶ್ರೀರಾಮುಲು

sriramulu
11/11/2023

ಬೆಂಗಳೂರು: ಬಿ.ವೈ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ  ಆಯ್ಕೆಯಾಗಿರುವುದರಿಂದ ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಹಜ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು, ಅವರ ಆಯ್ಕೆಯಿಂದ ನಮಗೂ ಖುಷಿ ಇದೆ. ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.

ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ