ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್ ನಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಇಬ್ಬರು ಜವಾನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ.
ಶೋಧ ಕಾರ್ಯಾಚರಣೆಯ ನಂತರ ಧರ್ಮಸಾಲ್‌ನ ಬಾಜಿಮಾಲ್ ಪ್ರದೇಶದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲುಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದರಿಂದ ಈ ಪ್ರದೇಶದಲ್ಲಿ ತೀವ್ರವಾದ ಗುಂಡಿನ ಚಕಮಕಿ ನಡೆಯಿತು.
ಮೃತಪಟ್ಟವರಲ್ಲಿ ಇಬ್ಬರು ಕ್ಯಾಪ್ಟನ್ ಗಳು ಮತ್ತು ಇಬ್ಬರು ಹವಾಲ್ದಾರ್ ಗಳು ಸೇರಿದ್ದಾರೆ. ಇತರ ಅಧಿಕಾರಿಗಳು ಗಾಯಗೊಂಡಿದ್ದಾರೆ. ಎನ್ ಕೌಂಟರ್ ನಲ್ಲಿ ಗಾಯಗೊಂಡವರನ್ನು ಉಧಂಪುರದ ಸೇನಾ ಕಮಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಾಜಿಮಾಲ್‌ನಲ್ಲಿ ಸಿಕ್ಕಿಬಿದ್ದ ಇಬ್ಬರು ಭಯೋತ್ಪಾದಕರು ವಿದೇಶಿ ಪ್ರಜೆಗಳು ಎಂದು ಶಂಕಿಸಲಾಗಿದ್ದು, ಭಾನುವಾರದಿಂದ ಈ ಪ್ರದೇಶದಲ್ಲಿ ಇವರು ಸಂಚರಿಸುತ್ತಿದ್ದು, ಪೂಜಾ ಸ್ಥಳದಲ್ಲಿ ಆಶ್ರಯ ಪಡೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರನ್ನು ಪತ್ತೆಹಚ್ಚಲು ಭಾನುವಾರದಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಕಾರ್ಯಾಚರಣೆಯಿಂದಾಗಿ ಗ್ರಾಮಸ್ಥರಿಗೆ ಮನೆಯೊಳಗೆ ಇರಲು ಸೂಚನೆ ನೀಡಲಾಯಿತು.
ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ನಲ್ಲಿ ಕಳೆದ ಹದಿನೆಂಟು ತಿಂಗಳುಗಳಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗಿದೆ. ವಿಶೇಷವೆಂದರೆ, ನವೆಂಬರ್ 17 ರಂದು ರಾಜೌರಿಯ ಗುಲ್ಲರ್ ಬೆಹ್ರೋಟೆ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಗಿತ್ತು.