ವೇದಿಕೆಯ ಮೇಲೆಯೇ ಕುಸಿದು ಬಿದ್ದ ಗುಜರಾತ್  ಸಿಎಂ | ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ - Mahanayaka
8:28 PM Thursday 6 - February 2025

ವೇದಿಕೆಯ ಮೇಲೆಯೇ ಕುಸಿದು ಬಿದ್ದ ಗುಜರಾತ್  ಸಿಎಂ | ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

15/02/2021

ಅಹ್ಮದಾಬಾದ್: ವಡೋದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

64 ವರ್ಷದ ರೂಪಾನಿ ಅವರು ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವನೆಯ ಪ್ರಚಾರ ರಾಲಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿಯೇ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ತಕ್ಷಣ ಕಾರ್ಯಕ್ರಮ ರದ್ದುಗೊಳಿಸಿ, ಅಹಮದಾಬಾದ್‍ಗೆ ಕರೆದುತಂದು ಯು.ಎನ್. ಮೆಹತಾ ಆಸ್ಪತ್ರೆಗೆ ಸೇರಿಸಲಾಗಿದೆ.

ವಿಪರೀತ ಆಯಾಸ ಹಾಗೂ ನಿರ್ಜಲೀಕರಣದಿಂದಾಗಿ ರೂಪಾನಿ ಅವರು ಮೂರ್ಚೆ ಹೋಗಿದ್ದಾರೆ, ಇನ್ನಾವುದೇ ಸಮಸ್ಯೆಯಿಲ್ಲ. ಅವರ ಆರೋಗ್ಯ ಈಗ ಸುಧಾರಿಸಿದೆ. ಆದರೂ ಅವರನ್ನು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಸುಧಾರಿಸಿಕೊಳ್ಳಲು ಸಲಹೆ ನೀಡಲಾಗಿದೆ ಎಂದು ವೈದ್ಯ ಆರ್.ಕೆ. ಪಟೇಲ್ ಹೇಳಿದ್ದಾರೆ.

ಸಿಎಂ ಆರೋಗ್ಯ ಚೆನ್ನಾಗಿದೆ. ಸ್ಪಲ್ಪ ದಣಿದಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ವೈದ್ಯ ನಿಗಾ ಘಟಕದಲ್ಲಿರಿಸಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ