ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ, ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ: ಗೃಹ ಸಚಿವ ಜಿ.ಪರಮೇಶ್ವರ್ - Mahanayaka

ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ, ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ: ಗೃಹ ಸಚಿವ ಜಿ.ಪರಮೇಶ್ವರ್

g parameshwar
06/01/2024

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಇನ್ಸ್ ಪೆಕ್ಟರ್ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ ಇದ್ದಾರೆ. ಅವರು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ಶ್ರೀಕಾಂತ್ ಬಂಧಿಸಿದ ಪೊಲೀಸ್ ನನ್ನು ಅಮಾನತುಗೊಳಿಸಬೇಕೆಂಬ ಬಿಜೆಪಿ ಆಗ್ರಹ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಕಾರಣಕ್ಕೆ ಮಾಡಬೇಕು? ಇನ್ಸ್ ಪೆಕ್ಟರ್ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಿಲ್ಲ. ಅವರ ಕರ್ತವ್ಯವನ್ನು ಮಾತ್ರ ನಿಭಾಯಿಸಿದ್ದಾರೆ ಎಂದರಲ್ಲದೇ ಈ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.

ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ಬಿಜೆಪಿ ನಾಯಕರ ಆರೋಪಗಳಿಗೆ ಪರಮೇಶ್ವರ್ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ