ಅತಿಯಾಗಿ ವಿಟಮಿನ್ ಸಿ ಸೇವನೆ ಮಾಡಿದ್ರೆ ಏನಾಗುತ್ತೆ ಗೊತ್ತಾ? - Mahanayaka

ಅತಿಯಾಗಿ ವಿಟಮಿನ್ ಸಿ ಸೇವನೆ ಮಾಡಿದ್ರೆ ಏನಾಗುತ್ತೆ ಗೊತ್ತಾ?

vitamin c
06/01/2024

ಕೋವಿಡ್ ಕಾಲದಲ್ಲಿ ಜನರು ವಿಟಮಿನ್ ಸಿ ಬಗ್ಗೆ ಹೆಚ್ಚಾಗಿ ತಿಳಿದು ಕೊಂಡರು. ವಿಟಮಿನ್ ಸಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕ್ಯಾನ್ಸರ್ ಮತ್ತು ಇತರ ಅನೇಕ ಗಂಭೀರ ರೋಗಗಳ ಅಪಾಯಗಳಿಂದ ನಮ್ಮನ್ನು ರಕ್ಷಣೆ ಮಾಡುತ್ತದೆ. ಆದರೆ ವಿಟಮಿನ್ ಸಿ ಅತೀ ಹೆಚ್ಚು ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಮೊದಲಿಗೆ ವಿಟಮಿನ್ ಸಿಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ: ವಿಟಮಿನ್ ಸಿ, ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಕರುಳಿನಲ್ಲಿರುವ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳ ನಡುವಿನ ಸಮತೋಲನವನ್ನು ನಿರ್ವಹಿಸುತ್ತದೆ.

ದೇಹದಲ್ಲಿ ವಿಟಮಿನ್ ಸಿ ಉತ್ಪತ್ತಿಯಾಗುವುದಿಲ್ಲ. ಆದ್ದರಿಂದ ಆಹಾರದ ಮೂಲಕ ವಿಟಮಿನ್ ಸಿ ಸೇವನೆ ಮಾಡಬೇಕು. ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ, ಕಿವಿ, ಸ್ಟ್ರಾಬೆರಿ ಹಣ್ಣುಗಳ ಸೇವನೆ ಮಾಡಬೇಕು.

ವಯಸ್ಕ ಮಹಿಳೆಯರಿಗೆ ಪ್ರತಿದಿನ 75 ಮಿಲಿಗ್ರಾಂ ವಿಟಮಿನ್ ಸಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಪುರುಷರು ಪ್ರತಿ ದಿನ 90 ಮಿಲಿಗ್ರಾಂ ವಿಟಮಿನ್ ಸಿ ಸೇವನೆ ಮಾಡಬೇಕು. ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಪ್ರತಿ ದಿನ 85 ರಿಂದ 120 ಮಿಗ್ರಾಂ ವರೆಗೆ ಸೇವನೆ ಮಾಡಬೇಕು. ವಿಟಮಿನ್ ಸಿ ಯ ಗರಿಷ್ಠ ಮಿತಿಯು ಪ್ರತಿದಿನ 2,000 ಮಿಗ್ರಾಂ.

ವಿಟಮಿನ್ ಸಿ ಅತಿಯಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುತ್ತದೆ. ಇದು ಜೀರ್ಣಕ್ರಿಯೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಅತಿಸಾರ, ಸೆಳೆತ ಮತ್ತು ವಾಕರಿಕೆಗೆ ಕಾರಣವಾಗಬಹುದು. ಹಾಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕು ಅನ್ನೋ ಕಾರಣಕ್ಕೆ ಅತೀ ಹೆಚ್ಚು ಸೇವನೆ ಮಾಡುವುದು ಒಳ್ಳೆಯದಲ್ಲ. ಅತಿಯಾದ್ರೆ ಅಮೃತವೂ ವಿಷ ಅನ್ನೋ ಗಾದೆ ಮಾತಿನಂತೆ, ಆರೋಗ್ಯಕ್ಕೆ ಒಳ್ಳೆಯದು ಅಂತ ಮಿತಿ ಮೀರಿ ಯಾವುದನ್ನೂ ಸೇವನೆ ಮಾಡಬಾರದು.

ಇತ್ತೀಚಿನ ಸುದ್ದಿ