“ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ!”

ಬೆಂಗಳೂರು: ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ, ಮಂಗಳಾರತಿ ನಡೆಸಲು ರಾಜ್ಯ ಸರ್ಕಾರ ಸೂಚಿಸಿದೆ.
ಸರ್ಕಾರದ ಈ ಸೂಚನೆಯ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿದ್ದು, ಇದು ತುಷ್ಟೀಕರಣದ ವಿರುದ್ಧ ಹಿಂದುತ್ವಕ್ಕೆ ಸಿಕ್ಕ ದಿಗ್ವಿಜಯ ಅಂತ ವ್ಯಾಖ್ಯಾನಿಸಿದ್ದಾರೆ.
ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಆಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಆರ್.ಅಶೋಕ್ ಹೇಳಿದ್ದಾರೆ.