ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದು ನನ್ನ ವೈಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ ಎಂದು ಪರಮೇಶ್ವರ್ ಹೇಳಿದರು.
ನಾವು ಹಿಂದುಗಳಲ್ವಾ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ವಿಶೇಷ ಪೂಜೆ ಸಲ್ಲಿಸುತ್ತೇವೆ ಅದರಲ್ಲೇನು ತಪ್ಪಿದೆ ಎಂದಿದ್ದಾರೆ.
ರಾಮಮಂದಿರ ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿದ್ದ ವೇಳೆ ರಾಮಮಂದಿರವನ್ನು ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್ ಇದೀಗ ರಾಮಭಕ್ತಿಯನ್ನು ಪ್ರದರ್ಶಿಸುತ್ತಿರುವುದರ ಬಗ್ಗೆ ಸಂಘಪರಿವಾರ ಹಾಗೂ ಹಿಂದುತ್ವ ಮುಖಂಡರು ವ್ಯಂಗ್ಯವಾಡಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಪಡೆದುಕೊಳ್ಳುವ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.