ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರು: 18 ವರ್ಷ ತುಂಬುವ ಮೊದಲೇ ಗರ್ಭಿಣಿಯರಾಗುವ ಪ್ರಕರಣ ಏರಿಕೆ! - Mahanayaka

ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರು: 18 ವರ್ಷ ತುಂಬುವ ಮೊದಲೇ ಗರ್ಭಿಣಿಯರಾಗುವ ಪ್ರಕರಣ ಏರಿಕೆ!

pregnancy
12/01/2024

‌ವಿಜಯಪುರ: 18 ವರ್ಷ ತುಂಬುವ ಒಳಗೆ ಬಾಲಕಿಯರು ಗರ್ಭಿಭಿಯಾಗುವ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗುತ್ತಿದ್ದು, 2023ರ ಜನವರಿಯಿಂದ ನವೆಂಬರ್‌ ವರೆಗೆ ರಾಜ್ಯದಲ್ಲಿ ಒಟ್ಟು 28,657 ಬಾಲಕಿಯರು ಗರ್ಭಿಣಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳಿದ್ದು, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 2,254 ಮಂದಿ ಗರ್ಭಿಣಿಯರು ಇದ್ದಾರೆ. ವಿಜಯಪುರದಲ್ಲಿ 2,004 ಬಾಲ ಗರ್ಭಿಣಿಯರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 56 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ವರದಿ ತಿಳಿಸಿದೆ.

ರಾಜ್ಯದಲ್ಲಿ ಗ್ರಾಮದಿಂದ ರಾಜ್ಯ ಮಟ್ಟದ ವರೆಗೆ 59 ಸಾವಿರ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿದ್ದರೂ ಬಾಲ್ಯ ವಿವಾಹ ತಡೆ ಸಾಧ್ಯವಾಗಿಲ್ಲ, ಈ ಅಧಿಕಾರಿಗಳೆಲ್ಲ ಏನು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನಿಸುವಂತಾಗಿದೆ.


Provided by

ಶಾರೀರಿಕ ಹಾಗೂ ಬೌದ್ಧಿಕವಾಗಿ ಬೆಳವಣಿಗೆಯಾಗುವ ಬಾಲಕಿಯರಿಗೆ ಹಲವು ಸ್ವರೂಪಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ರಕ್ತ ಹೀನತೆ ಮತ್ತು ಪೌಷ್ಠಿಕಾಂಶದ ಕೊರತೆ ಸೃಷ್ಟಿಯಾಗುತ್ತದೆ. ಇದರಿಂದಾಗಿ ತಾಯಿ ಮತ್ತು ಮಗು ಸಾವನ್ನಪ್ಪುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಇತ್ತೀಚಿನ ಸುದ್ದಿ