ಮೃತ ಅಭಿಮಾನಿಗಳ ಕುಟುಂಬಕ್ಕೆ ಪರಿಹಾರದ ಚೆಕ್ ತಲುಪಿಸಿದ ಯಶ್ - Mahanayaka

ಮೃತ ಅಭಿಮಾನಿಗಳ ಕುಟುಂಬಕ್ಕೆ ಪರಿಹಾರದ ಚೆಕ್ ತಲುಪಿಸಿದ ಯಶ್

yash
17/01/2024

ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದ ಪ್ರಯುಕ್ತ ಬ್ಯಾನರ್ ಕಟ್ಟುತ್ತಿದ್ದ ವೇಳೆ ಅಭಿಮಾನಿಗಳು ದುರಂತವಾಗಿ ಸಾವನ್ನಪ್ಪಿದ ಘಟನೆ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಮೃತರ ಕುಟುಂಬಸ್ಥರಿಗೆ ಯಶ್ ಪರಿಹಾರದ ಚೆಕ್ ನೀಡಿದ್ದಾರೆ.

ಯಶ್ ಅವರ ಆಪ್ತರು ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ಯಶೋಮಾರ್ಗ ಫೌಂಡೇಶನ್ ಕಡೆಯಿಂದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದರು.

ಯಶ್​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತು ತಮ್ಮ ದುಃಖವನ್ನು  ತೋಡಿಕೊಂಡರು. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದ್ದು, ಅವರ ದುಃಖದ ಕಟ್ಟೆ ಒಡೆದಿತ್ತು.

ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಮಕ್ಕಳನ್ನು ಕಳೆದುಕೊಂಡ ಮೂರೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರದ ಹಣ ನೀಡಿದರು.

ಇತ್ತೀಚಿನ ಸುದ್ದಿ