HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆ.17 ಕೊನೆಯ ದಿನ: ಅವಧಿ ಮೀರಿದ್ರೆ ಕಟ್ಟಬೇಕು ದುಬಾರಿ ದಂಡ - Mahanayaka

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆ.17 ಕೊನೆಯ ದಿನ: ಅವಧಿ ಮೀರಿದ್ರೆ ಕಟ್ಟಬೇಕು ದುಬಾರಿ ದಂಡ

hsrp number plate
06/02/2024

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಫೆ.17ರವರೆಗೆ ಗಡುವು ನೀಡಿದ್ದು, ಈ ಅವಧಿಯೊಳಗೆ ನಂಬರ್‌ ಪ್ಲೇಟ್‌ ಅಳವಡಿಸದೇ ಇದ್ದರೆ ದಂಡ ವಿಧಿಸಲು ಇಲಾಖೆ ಮುಂದಾಗಿದೆ.


Provided by

ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (HSRP) ಅಳವಡಿಸುವುದು ಕಡ್ಡಾಯವಾಗಿದೆ.

2019 ಏಪ್ರಿಲ್ 1ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-HSRP ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆ.17ಕ್ಕೆ ಮುಕ್ತಾಯವಾಗಲಿದೆ. ನಂಬರ್‌ ಪ್ಲೇಟ್‌ ಬದಲಾವಣೆಗೆ ವಾಹನ ಸವಾರರು ಆಸಕ್ತಿ ತೋರದ ಹಿನ್ನೆಲೆಯಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಎರಡನೇಯ  ಬಾರಿಗೆ ಸಿಕ್ಕಿ ಬಿದ್ದರೆ 2 ಸಾವಿರ ರೂಪಾಯಿ ದಂಡ ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿದೆ.


Provided by

ಹಳೆಯ ವಾಹನಗಳಿಗೆ HSRP ಅಳವಡಿಕೆಗೆ https://transport.karnataka.gov.in   ಅಥವಾ www.siam.in  ಗೆ ಭೇಟಿ ನೀಡಬಹುದಾಗಿದೆ.

ಇತ್ತೀಚಿನ ಸುದ್ದಿ