ಶಾಸಕಿಯ ಪತಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಿಜೆಪಿ
24/10/2020
ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್ ಅವರಿಗೆ ಟಿಕೆಟ್ ಕೈತಪ್ಪಿತ್ತು. ಬಿಜೆಪಿಯಿಂದ ಶಿರಾದ ಚಿದಾನಂದ ಗೌಡ ಅವರಿಗೆ ಟಿಕೆಟ್ ನೀಡಲಾಗಿತ್ತು. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ನಾಮಪತ್ರ ವಾಪಸ್ ಪಡೆಯುವಂತೆ ಶ್ರೀನಿವಾಸ್ ಗೆ, ಡಿಸಿಎಂ ಅಶ್ವಥ್ ನಾರಾಯಣ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತುಕತೆ ನಡೆಸಿದ್ದರು. ಪಕ್ಷದ ಮುಖಂಡರ ಮಾತಿಗೆ ಅವರು ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ