ಬಿಜೆಪಿ ಜನಾಶೀರ್ವಾದದಿಂದ ಈವರೆಗೂ ಅಧಿಕಾರ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನತೆ ಯಾವತ್ತೂ ಬಿಜೆಪಿಯನ್ನು ಆಶೀರ್ವದಿಸಿ ಅಧಿಕಾರಕ್ಕೆ ತಂದಿಲ್ಲ, 2008 ರಲ್ಲಿ ಅವರಿಗೆ ದಕ್ಕಿದ್ದು 110 ಸ್ಥಾನ ಮಾತ್ರ. ಆಗಲೇ ಯಡಿಯೂರಪ್ಪ ಆಪರೇಶನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು ಎಂದು ಸಿದ್ದರಾಮಯ್ಯ ಹೇಳಿದರು.
ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರದ 17 ಶಾಸಕರನ್ನು ಖರೀದಿಸಿ ಇವರು ಅಧಿಕಾರಕ್ಕೆ ಬಂದರು ಎಂದು ಹೇಳಿದ ಸಿದ್ದರಾಮಯ್ಯ, ಇದುವರೆಗೆ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆಯೇ ಹೊರತು ಜನಾರ್ಶೀವಾದದೊಂದಿಗೆ ಮುಂಬಾಗಿಲಿಂದ ಬಂದು ಅಧಿಕಾರ ನಡೆಸಿಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
2023–24 ಸಾಲಿಗೆ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್ ಗಿಂತ ಅದೇ ವರ್ಷ ತಾವು ಅಧಿಕಾರಕ್ಕೆ ಬಂದು ರೂ. 62,200 ಕೋಟಿಗಳಷ್ಟು ಹೆಚ್ಚಿನ ಗಾತ್ರದ ಬಜೆಟ್ ಮಂಡಿಸಿದ್ದೆ ಎಂದು ಹೇಳಿದ ಸಿದ್ದರಾಮಯ್ಯ ವಿಷಯ ಹೀಗಿರುವಾಗ ಅಭಿವೃದ್ಧಿ ಕಾರ್ಯಗಳಿಗಾಗಿ ಹಣ ಮೀಸಲಿಟ್ಟಿಲ್ಲ ಅಂತ ಬಿಜೆಪಿ ನಾಯಕರು ಅದ್ಹೇಗೆ ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth