ಕೆ.ಶಿವರಾಮ್ ನಿಧನದ ಸುದ್ದಿ ನಿಜವಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ: ಬೆಂಬಲಿಗರಿಂದ ಸ್ಪಷ್ಟನೆ

ಬೆಂಗಳೂರು: ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರ ನಿಧನದ ಸುದ್ದಿ ಸುಳ್ಳಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆ.ಶಿವರಾಮ್ ಅವರ ಚಳುವಳಿಯ ಒಡನಾಡಿಗಳು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆ.ಶಿವರಾಮ್ ಅವರ ನಿಕಟ ವರ್ತಿಗಳು ಹಂಚಿಕೊಂಡಿರುವ ಮಾಹಿತಿಗಳನ್ವಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಆದರೆ ಈ ಸುದ್ದಿ ಸುಳ್ಳು ಅವರಿಗೆ ಇನ್ನೂ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಅವರ ಬೆಂಬಲಿಗರು ಸ್ಪಷ್ಟನೆ ನೀಡಿದ್ದಾರೆ.
ನಿನ್ನೆಯಿಂದಲೇ ಕೆ.ಶಿವರಾಮ್ ಅವರ ಆರೋಗ್ಯ ಚೇತರಿಕೆ ಆಗಲಿ ಎಂದು ನಾವು ಊಟ, ತಿಂಡಿ, ನೀರಿಲ್ಲದೇ ಕಾಯುತ್ತಿದ್ದೇವೆ. ಈ ನಡುವೆ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಈ ರೀತಿಯ ಸುದ್ದಿ ಬಂದಿರೋದು ಬೇಸರ ತಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕೆ.ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಲಾಗುತ್ತಿದೆ, ಮಿಕ್ಕಿದ್ದು ಭಗವಂತನ ಇಚ್ಛೆ ಎಂದು ಬೆಂಬಲಿಗರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth