ಮೈಮರೆತು ಬೈಕ್ ನಲ್ಲಿ ಪ್ರಿಯತಮೆ ಜೊತೆ ರೊಮ್ಯಾನ್ಸ್: ಪಾಗಲ್ ಪ್ರೇಮಿ ಪೊಲೀಸ್ ವಶಕ್ಕೆ

ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬೈಕ್ ಚಾಲನೆ ಮಾಡುತ್ತಾ ಪ್ರಿಯತಮೆ ಜೊತೆಗೆ ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಅಹಮದಾಬಾದ್ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಫೆಬ್ರವರಿ 25 ರಂದು 21 ವರ್ಷದ ವಿವೇಕ್ ರಾಮ್ವಾನಿ ತನ್ನ ಬೈಕ್ನಲ್ಲಿ ತನ್ನ ಮುಂದೆ ಕುಳಿತಿರುವ ಹುಡುಗಿಯೊಂದಿಗೆ ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೊ ಇದಾಗಿದೆ.
ವಿವೇಕ್ ನಿಕೋಲ್ ರಿಂಗ್ ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದರು. ವೀಡಿಯೊ ವೈರಲ್ ಆದ ನಂತರ ಪೊಲೀಸರು ವಿವೇಕ್ ಅವರನ್ನು ವಶಕ್ಕೆ ಪಡೆದರು. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 177, 181, 184, 110 ಮತ್ತು 117 ರ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವತಿಯ ಗುರುತು ಇನ್ನೂ ತಿಳಿದುಬಂದಿಲ್ಲ ಮತ್ತು ಪೊಲೀಸರು ಅವಳನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth