ಚುರಾಚಂದ್ ಪುರ ಹಿಂಸಾಚಾರ: 8 ಎಫ್ಐಆರ್ ದಾಖಲು, 2 ಸಿಬಿಐಗೆ ಹಸ್ತಾಂತರ: ಮಣಿಪುರ ಸಿಎಂ ಹೇಳಿಕೆ
ಚುರಾಚಂದ್ ಪುರ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಎಂಟು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಎರಡು ಪ್ರಕರಣಗಳನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.
ಉಗ್ರರು ಭಾಗಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಈವರೆಗೆ 20 ಜನರು ಈ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಗುರುತಿಸಲಾಗಿದೆ ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.
12 ನೇ ಮಣಿಪುರ ವಿಧಾನಸಭೆಯ 5 ನೇ ಅಧಿವೇಶನದಲ್ಲಿ ಮುಖ್ಯಮಂತ್ರಿ ಶುಕ್ರವಾರ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಈ ಸಂಘರ್ಷದ ಸಮಯದಲ್ಲಿ ರಾಜ್ಯ ಪಡೆಗಳ ಗಾಯಗಳು ಮತ್ತು ಸಾವುಗಳ ಬಗ್ಗೆ ಶಾಸಕ ಕೆ ರಂಜಿತ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿರೇನ್ ಸಿಂಗ್, ಒಂಬತ್ತು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 98 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth