ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿ; ಗ್ರಾಮ  ಕರಣಿಕ ದಾರುಣ ಸಾವು - Mahanayaka

ವಾಕಿಂಗ್ ಹೋಗಿದ್ದ ವೇಳೆ ಬೈಕ್ ಡಿಕ್ಕಿ; ಗ್ರಾಮ  ಕರಣಿಕ ದಾರುಣ ಸಾವು

21/02/2021

ಉಜಿರೆ: ವಾಕಿಂಗ್  ಹೋಗಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಗ್ರಾಮ  ಕರಣಿಕ ಚಂದ್ರ ಮೋಹನ್ ರೈ(80) ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶನಿವಾರ ಸಂಜೆ ಅವರು ವಾಕಿಂಗ್ ಹೋಗಿದ್ದ ವೇಳೆ ಬೈಕ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉಜಿರೆ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುವಂತೆ ಹೇಳಿದ್ದು, ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಅವರನ್ನು ಸಾಗಿಸಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಅವರು ನಿಧನರಾಗಿದ್ದಾರೆ.

ಇತ್ತೀಚಿನ ಸುದ್ದಿ