5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ!
ಬೆಂಗಳೂರು: ಈಗಾಗಲೇ ಆರಂಭವಾಗಿರುವ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಹೀಗಾಗಿ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.
ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth