ಆತ್ಮಹತ್ಯೆಗೆ ಶರಣಾದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ  | ಕಾರಣ ಬಯಲು! - Mahanayaka

ಆತ್ಮಹತ್ಯೆಗೆ ಶರಣಾದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ  | ಕಾರಣ ಬಯಲು!

22/02/2021

ಬಾಗಲಕೋಟೆ: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಸಿಂಧುರೇಖಾ ಸಿ.ಎಸ್.(25 ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿಯೇ ಈಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜ್ ಆವರಣದಲ್ಲಿರುವ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ ನಂತರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


Provided by

ಖಾಸಗಿ ಮೆಡಿಕಲ್ ಕಾಲೇಜ್ ನಲ್ಲಿ ಅಂತಿಮ ವರ್ಷದಲ್ಲಿ  ಯುವತಿ ಓದುತ್ತಿದ್ದಳೂ ಕಳೆದ ಹಲವು ದಿನಗಳಿಂದ  ಮಾನಸಿಕ ಖಿನ್ನತೆ ಅನುಭವಿಸುತ್ತಿದ್ದಳು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ