ತೆನೆ ಇಳಿಸಿ ‘ಕೈ’ ಹಿಡಿದ ಮೂವರು ಜೆಡಿಎಸ್ ನಾಯಕರು!
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು, ಜೆಡಿಎಸ್ ನ ಮೂವರು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಮಂಡ್ಯದ ಮಾಜಿ ಶಾಸಕ ಎಂ. ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯ ನಾಗಮಂಗಲದ ಅಪ್ಪಾಜಿ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ ಅವರು ಇಂದು ಕಾಂಗ್ರೆಸ್ ಗೆ ಸೇರಿದ್ದಾರೆ.
ಜೊತೆಗೆ ಆರ್.ಆರ್. ನಗರ ಎಚ್ಎಂಟಿ ವಾರ್ಡ್ ಮಾಜಿ ಕಾರ್ಪೊರೇಟರ್ ಆಶಾ ಸುರೇಶ್ ಕಾಂಗ್ರೆಸ್ ಸೇರ್ಪಡೆಯಾದವರಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮರಿತಿಬ್ಬೇಗೌಡ ಅತಿ ಹೆಚ್ಚು ಕ್ರಿಯಾಶೀಲ ನಾಯಕ ಹಾಗೂ ಪದವೀಧರರು, ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಜೆಡಿಎಸ್ ನ ದೊಡ್ಡ ಪಿಲ್ಲರ್ ಆಗಿದ್ದ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಅವರು ಕೌನ್ಸಿಲ್ ಸಭಾಪತಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷ ಸೇರಲು ಬಂದಿದ್ದಾರೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth