ಸುಟ್ಟ ಕಾರಿನಲ್ಲಿ ಪತ್ತೆಯಾದ ಮೃತದೇಹ ದಕ್ಷಿಣ ಕನ್ನಡ ಮೂಲದವರದ್ದು!: ರಹಸ್ಯ ಬಯಲು

ಬೆಳ್ತಂಗಡಿ: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೃತಪಟ್ಟವರು ದಕ್ಷಿಣ ಕನ್ನಡ ಮೂಲದವರು ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವ್ಯವಹಾರ ಸಂಬಂಧ ಮದ್ದಡ್ಕ ರಫೀಕ್ ಎಂಬವರ ಮಾಲಿಕತ್ವದ ಕಾರನ್ನು ಬಾಡಿಗೆಗೆ ಪಡೆದುಕೊಂಡು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದೀಕ್(34) ತುಮಕೂರಿಗೆ ಪ್ರಯಾಣಿಸಿದ್ದರು. ಆದರೆ ಬಳಿಕ ಅವರ ಮೃತದೇಹ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ವರದಿಗಳ ಪ್ರಕಾರ ನಕಲಿ ಚಿನ್ನ ದಂಧೆಯ ಆಸೆಗೆ ಮೃತರು ಬಲಿಯಾಗಿದ್ದಾರೆನ್ನಲಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವ ವೇಳೆ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಚಿನ್ನ ಮಾರಾಟ ಮಾಡುತ್ತೇವೆ ಎಂದು ಸುಳ್ಳು ಹೇಳಿದ ಆರೋಪಿಗಳು ಮೂವರನ್ನು ಕರೆಸಿ ಅವರಿಂದ ಅವರಿಂದ ಹಣ ದೋಚುವ ಪ್ಲಾನ್ ಮಾಡಿಕೊಂಡು ನಂತರ ಕೈಕಾಲು ಕಟ್ಟಿ ಕಾರಿಗೆ ಹಾಕಿ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ.ಸದ್ಯ 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth