ವಿಶ್ವಭಾರತಿ ವಿವಿ ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ - Mahanayaka
1:01 PM Saturday 21 - September 2024

ವಿಶ್ವಭಾರತಿ ವಿವಿ ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

31/03/2024

ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿನಿಯರು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಪ್ರತಿಯಾಗಿ ಲೈಂಗಿಕ ಕಿರುಕುಳಗಳನ್ನು ಎದುರಿಸಿದ್ದಾರೆ ಎಂದು ಆರೋಪಿಸಿ ವಿವಿ ಪ್ರೊಫೆಸರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ದೂರಿನಲ್ಲಿ, ಪರ್ಷಿಯನ್, ಉರ್ದು ಮತ್ತು ಇಸ್ಲಾಮಿಕ್ ಸ್ಟಡೀಸ್ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಆರೋಪಿಯು ವಾಟ್ಸಾಪ್ ನಲ್ಲಿ ವೈಯಕ್ತಿಕವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ. ಅಲ್ಲದೇ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ‌ ಕುರಿತು ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಯನ್ನು (ಐಸಿಸಿ) ಸಂಪರ್ಕಿಸಿದರೆ ಸಮಿತಿಯು ಆರೋಪಗಳನ್ನು ಪರಿಶೀಲಿಸಲಿದೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ವಿಶ್ವ-ಭಾರತಿ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ