ಸದ್ಯಕ್ಕೆ ಬಾಕಿ ತೆರಿಗೆ ವಸೂಲಿ ಇಲ್ಲ: ಕಾಂಗ್ರೆಸ್ ಗೆ ಬಿಗ್ ರಿಲೀಫ್ - Mahanayaka
11:26 AM Saturday 21 - September 2024

ಸದ್ಯಕ್ಕೆ ಬಾಕಿ ತೆರಿಗೆ ವಸೂಲಿ ಇಲ್ಲ: ಕಾಂಗ್ರೆಸ್ ಗೆ ಬಿಗ್ ರಿಲೀಫ್

02/04/2024

ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರವು ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಭರವಸೆ ನೀಡಿದೆ.

ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ