ಅಮಾನವೀಯ: ಅತ್ಯಾಚಾರಕ್ಕೊಳಗಾದ ಬಾಲಕಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಿದ ಶಾಲೆ! - Mahanayaka

ಅಮಾನವೀಯ: ಅತ್ಯಾಚಾರಕ್ಕೊಳಗಾದ ಬಾಲಕಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಿದ ಶಾಲೆ!

rape
05/04/2024

ರಾಜಸ್ಥಾನ: ಕಳೆದ ವರ್ಷ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ವರದಿಗಳ ಪ್ರಕಾರ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯು ಪರೀಕ್ಷೆಗೆ ಹಾಜರಾದರೆ “ಇಲ್ಲಿನ ವಾತಾವರಣ ಹಾಳಾಗುತ್ತದೆ” ಎನ್ನುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನೀಡದೇ ಶಾಲೆಯ ಅಧಿಕಾರಿಗಳು ಶಾಲೆಯಿಂದ ದೂರವಿರಿಸಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಇದರಿಂದ ನೊಂದ ಬಾಲಕಿಯು ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಅಜ್ಮೀರ್ ನ ಖಾಸಗಿ ಶಾಲೆಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಾಗಿ CWC ಅಧ್ಯಕ್ಷೆ ಅಂಜಲಿ ಶರ್ಮಾ ತಿಳಿಸಿದ್ದಾರೆ.

ಘಟನೆಯ ವಿವರ: ಕಳೆದ ವರ್ಷ ಅಕ್ಟೋಬರ್ ನಲ್ಲಿ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪ ಮತ್ತು ಇತರ ಇಬ್ಬರು ಪುರುಷರು ಸೇರಿ ಅತ್ಯಾಚಾರಗೈದಿದ್ದರು. ಈ ಘಟನೆಯ ನಂತರ ವಿದ್ಯಾರ್ಥಿನಿಯು ಶಾಲೆಗೆ ಬರುವುದರಿಂದ ಶಾಲೆಯ ವಾತಾವರಣ ಹಾಳಾಗಬಹುದು ಎಂದು ಶಾಲೆಯ ಅಧಿಕಾರಿಗಳು ಮನೆಯಿಂದಲೇ ಓದುವಂತೆ ಸೂಚಿಸಿದ್ದರು. ಆಕೆ ಒಪ್ಪಿಕೊಂಡು ಮನೆಯಿಂದಲೇ ಬೋರ್ಡ್ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಿದ್ದಳು.

ಆದರೆ ಆಕೆ ಪರೀಕ್ಷೆಯ ಪ್ರವೇಶ ಪತ್ರವನ್ನು ತೆಗೆದುಕೊಳ್ಳಲು ಹೋದಾಗ ಶಾಲಾ ಆಡಳಿತ ಮಂಡಳಿ ಆಕೆಗೆ ಪರೀಕ್ಷೆ ಬರೆಯಲು ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ. ಇದರಿಂದ ನೊಂದು ಬಾಲಕಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾಳೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ