10ಕ್ಕೆ ಏರಿದ ಕಾಲರಾ ಪ್ರಕರಣಗಳು: ಬೆಂಗಳೂರಿನಲ್ಲೇ 6 ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲೇ 6 ಪ್ರಕರಣಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕಾರು ಚಾಲಕನಿಗೆ ಕಾಲರಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದರಡೆ ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ಹಿನ್ನೆಲೆ ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಿದೆ.
ಅಸ್ವಸ್ಥ 49 ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಕಾಲರಾ ಪತ್ತೆ ಆಗಿತ್ತು. ಇದರ ಬೆನ್ನಲ್ಲೇ ಮೆಡಿಕಲ್ ವಿದ್ಯಾರ್ಥಿನೀಯರ ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ. ಸೋಂಕು ಕಡಿಮೆಯಾಗುವವರೆಗೂ ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿನಿಯರು ಕೆಲ ದಿನಗಳ ಕಾಲ ಹಾಸ್ಟೆಲ್ ಬಿಟ್ಟು ಬೇರೆ ಕಡೆ ಶಿಫ್ಟ್ ಆಗುತ್ತಿದ್ದಾರೆ.
ಇತ್ತ ವಾರದೊಳಗೆ ಹಾಸ್ಟೆಲ್ ನ ಸಮಸ್ಯೆ ಸರಿಪಡಿಸೋದಾಗಿ ಆಡಳಿತ ಮಂಡಳಿ ಹೇಳಿದೆ. ಈ ಹಿನ್ನೆಲೆ ಸಮಸ್ಯೆ ಬಗೆಹರಿಯೋವರೆಗೂ ಬೇರೆಡೆ ಇರಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ. ಈಗಾಗಲೇ 49 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
49 ವಿದ್ಯಾರ್ಥಿಗಳ ಪೈಕಿ 22 ವಿದ್ಯಾರ್ಥಿನಿಯರ ಕಾಲರಾ ಕಲ್ಚರ್ ಟೆಸ್ಟ್ ವರದಿ ಕೈ ಸೇರಿದ್ದು, ಇಬ್ಬರಲ್ಲಿ ಪಾಸಿಟಿವ್ ವರದಿ ಬಂದಿದ್ದು, ಉಳಿದವರ ಕಾಲರಾ ವರದಿ ಏ. 8ಕ್ಕೆ ಕೈ ಸೇರಲಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth