ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬಸ್: ನಾಲ್ವರು ಸಾವು, 8 ಮಂದಿಯ ಸ್ಥಿತಿ ಗಂಭೀರ
ಚಿತ್ರದುರ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರ್ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ.
ಬಸ್ಸಿನಲ್ಲಿದ್ದವರು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಹೊಳಲ್ಕೆರೆ ಪಟ್ಟಣದ ಕಣಿವೆ ಆಂಜನೇಯ ದೇವಸ್ಥಾನದ ಬಳಿ ತಲುಪುವ ವೇಲೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮಗುಚಿ ಬಿದ್ದಿದೆ.
ಅಪಘಾತದಲ್ಲಿ ಖಾಸಗಿ ಬಸ್ ನುಜ್ಜುಗುಜ್ಜಾಗಿದೆ. ದುರಂತದಲ್ಲಿ 7 ತಿಂಗಳ ಮಗು ರಿಷಿಕಾ ಯಾವುದೇ ಅಪಾಯವಿಲ್ಲದೇ ಪಾರಾಗಿ ಅಚ್ಚರಿ ಸೃಷ್ಟಿಸಿದೆ.
ಹೊಳಲ್ಕೆರೆ ತಾಲೂಕಿನಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿರುವ ಹಿನ್ನೆಲೆ ಇಲ್ಲಿ ಪದೇ ಪದೇ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಇದೀಗ ನಾಲ್ಕು ಜನರ ಪ್ರಾಣವೂ ಹೋಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth