ಎಸ್ ಡಿಪಿಐ-ಆರೆಸ್ಸೆಸ್ ಕಾರ್ಯಕರ್ತರ ನಡುವೆ ಘರ್ಷಣೆ | ಆರೆಸ್ಸೆಸ್ ಕಾರ್ಯಕರ್ತನ ಬರ್ಬರ ಹತ್ಯೆ
25/02/2021
ಆಲಫುಳ: ಎಸ್ ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನೋರ್ವ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕೇರಳದ ಆಳಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ನಡೆದಿದೆ.
ನಂದು ಎಂಬವರು ಮೃತಪಟ್ಟ ಆರೆಸ್ಸೆಸ್ ಕಾರ್ಯಕರ್ತರ ಎಂದು ಗುರುತಿಸಲಾಗಿದೆ. ಆರೆಸ್ಸೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಈ ಸಂದರ್ಭ ಓರ್ವ ಆರೆಸ್ಸೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಇನ್ನೂ ಎಸ್ ಡಿಪಿಐ ಹಾಗೂ ಆರೆಸ್ಸೆಸ್ ನ ಇತರ ಕಾರ್ಯಕರ್ತರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಕೇರಳ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಈ ಘಟನೆಯ ಹಿಂದೆ ಪಿಎಫ್ ಐ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.