ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಖಾನ್ ಗೆ ಎದೆನೋವು: ಆಸ್ಪತ್ರೆಗೆ ದಾಖಲು
15/04/2024
ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ.
ಕೂಡಲೇ ಜಮೀರ್ ಅಹಮ್ಮದ್ ಖಾನ್ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದ್ರೋಗ ತಜ್ಞ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth