ಹಿರಿಯ ಕಾಂಗ್ರೆಸ್ ನಾಯಕ ವಸಂತ ಬಂಗೇರ ಇನ್ನಿಲ್ಲ..!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಅಲ್ಪಕಾಲದ ಅನಾರೋಗ್ಯದ ಬಳಿ ನಿಧನರಾಗಿದ್ದಾರೆ.
ಮೇ 8ರ ಸಂಜೆ 4 ಗಂಟೆಯ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದ್ದು, 79 ವರ್ಷ ವಯಸ್ಸಿನ ವಸಂತ ಬಂಗೇರ ಅವರು ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ನಿಧನರಾಗಿದ್ದಾರೆ.
ಕುವೆಟ್ಟು ಗ್ರಾಮದ ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ವಸಂತ ಬಂಗೇರ ಅವರು, 15 ಜನರಿ 1946ರಂದು ಜನಿಸಿದ್ದರು.
ಇತ್ತೀಚೆಗೆ ವಸಂತ ಬಂಗೇರ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಅವರು ನಿಧನರಾಗಿದ್ದಾರೆ.
ಮೇ 9ರಂದು ವಸಂತ ಬಂಗೇರ ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸಲಿದೆ ಎಂದು ಹೇಳಲಾಗಿದೆ. ಬಳಿಕ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: