ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಸಾವು, 25 ಮಂದಿಗೆ ಗಾಯ
ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ಮುಂಜಾನೆ ಟ್ರಕ್ ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯಕ್ಕೆ ಉತ್ತರ ಪ್ರದೇಶದ ಸುಮಾರು 30 ಜನರನ್ನು ಬಸ್ ಕರೆದುಕೊಂಡು ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈಷ್ಣೋದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಪಘಾತದಲ್ಲಿ ಬದುಕುಳಿದವರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth