ರಸ್ತೆಯಲ್ಲಿ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್: ವಾಹನ ಸಂಚಾರ ಅಸ್ತವ್ಯಸ್ತ
31/05/2024
ದಕ್ಷಿಣ ಕನ್ನಡ/ಬಂಟ್ವಾಳ: ಗ್ಯಾಸ್ ಟ್ಯಾಂಕರ್ ವೊಂದು ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ವೇಳೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರಿಂದ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: