ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರು! - Mahanayaka
10:12 AM Sunday 8 - September 2024

ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರು!

siddaramaiah dk shivakumar
01/06/2024

ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಡೀಲ್ ವಿಚಾರವಾಗಿ  ಕಾಂಗ್ರೆಸ್ ಹಲವು ಆರೋಪಗಳನ್ನು ಮಾಡಿತ್ತು.  ಈ ಸಂಬಂಧ ದಾಖಲಾಗಿದ್ದ ಖಾಸಗಿ ಮಾನನಷ್ಟ ಕೇಸ್​​ ವಿಚಾರಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಸಿಎಂ ಹುದ್ದೆಗೆ  2,500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಹೈಕಮಾಂಡ್ ​ಗೆ ನೀಡಿ ರಾಜ್ಯ ಬಿಜೆಪಿ ನಾಯಕರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಕೋವಿಡ್ ಕಿಟ್ ಪೂರೈಕೆ ಟೆಂಡರ್​ ಡೀಲ್ ​ನಲ್ಲಿ ಶೇ. 75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್​ನಲ್ಲಿ ಶೇ. 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮಿಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್​  ಆರೋಪಿಸಿತ್ತು.

ಈ ಆರೋಪಗಳನ್ನು ಪ್ರಶ್ನಿಸಿ, ಬಿಜೆಪಿ ಪ್ರಧಾನಕಾರ್ಯದರ್ಶಿ ಕೇಶವಪ್ರಸಾದ್, ಖಾಸಗಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು.


Provided by

ಈ ಕೇಸ್ ಹಿನ್ನೆಲೆ  ಕೋರ್ಟ್ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು.  ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ  ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನೂ  ವಿಚಾರಣೆ ಹಾಜರಾಗದ ರಾಹುಲ್ ಗಾಂಧಿಗೆ ವಿನಾಯತಿ ನೀಡುವಂತೆ ಕೋರ್ಟ್ ಬಳಿ ಕಾಂಗ್ರೆಸ್ ಪರ ವಕೀಲರು ಮನವಿ ಮಾಡಿಕೊಂಡರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ