ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಸಾಗರ್ ಖಂಡ್ರೆ, ಪಿ.ಸಿ.ಗದ್ದಿಗೌಡರ ಗೆಲುವು - Mahanayaka
6:02 AM Wednesday 23 - October 2024

ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಸಾಗರ್ ಖಂಡ್ರೆ, ಪಿ.ಸಿ.ಗದ್ದಿಗೌಡರ ಗೆಲುವು

bjp
04/06/2024

ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.

ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು:

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 1 ಲಕ್ಷ 25 ಸಾವಿರ ಅಧಿಕ ಮತಗಳಿಂದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ.

26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಚಿಕ್ಕ ಸಂಸದನಾಗಿ ಆಯ್ಕೆ ಆಗಿದ್ದಾರೆ. 2 ವರ್ಷ ಸಂಸದರಾಗಿ ಕೇಂದ್ರ ಸಚಿವರಾಗಿದ್ದ ಖೂಬಾಗೆ 26ರ ಹುಡುಗ ಸೋಲುಣಿಸಿದ್ದಾರೆ.
ಮಾಜಿ ಸಚಿವ ಭೀಮಣ್ಣ ಖಂಡ್ರೆ ಮೊಮ್ಮಗ, ಸಚಿವ ಈಶ್ವರ ಖಂಡ್ರೆ ಪುತ್ರ ಆಗಿರುವ ಸಾಗರ್ ಪ್ರಥಮ ಬಾರಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಬಾಗಲಕೋಟೆ ಪಿ.ಸಿ.ಗದ್ದಿಗೌಡರ ಗೆಲುವು:

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಿದ್ದಾರೆ.

ಜಗದೀಶ ಶೆಟ್ಟರ್ ಗೆ ಭರ್ಜರಿ ಗೆಲುವು:

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಸಲ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಬಿಜೆಪಿ ಭದ್ರಕೋಟೆ ಮತ್ತಷ್ಟು ಬಿಗಿಯಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

 

ಇತ್ತೀಚಿನ ಸುದ್ದಿ