ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಡಿಸಿಎಂ ಕುರ್ಚಿಯಲ್ಲಿ ಫಡ್ನವಿಸ್ ಗೆ ನಡುಕ..!
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಆಗಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ದೇವೇಂದ್ರ ಫಡ್ನವಿಸ್ ಮುಂದಾಗಿದ್ದಾರೆ. ಪಕ್ಷದ ಬಲವರ್ಧನೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವುದಕ್ಕಾಗಿ ತಾನು ರಾಜೀನಾಮೆ ನೀಡುತ್ತಿದ್ದೇನೆ ಎಂದವರು ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಾರಿ ಹಿನ್ನಡೆ ಎದುರಾಗಿದೆ. ಇದರ ನೈತಿಕ ಹೊಣೆ ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಪಡ್ನವಿಸ್ ಮುಂದಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಆ ಸಮಯಕ್ಕೆ ಸರಿಯಾಗಿ ಪಕ್ಷವನ್ನು ಪುನರ್ ಸಂಘಟಿಸುವುದಕ್ಕಾಗಿ ತಾನು ಉಪಮುಖ್ಯಮಂತ್ರಿ ಸ್ಥಾನವನ್ನು ತೊರೆಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಕೇವಲ 9 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 23 ಸ್ಥಾನಗಳನ್ನು ಗೆದ್ದಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth