ದರ್ಶನ್ ರನ್ನು ಅರೆಸ್ಟ್ ಮಾಡಿಲ್ಲ ಎಂದ ದರ್ಶನ್ ಪರ ವಕೀಲರು!
ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪರ ವಕೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅನುಮಾನದ ಮೇರೆಗೆ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ದರ್ಶನ್ ಅವರನ್ನು ಅರೆಸ್ಟ್ ಮಾಡಿಲ್ಲಎಂದು ಹೇಳಿಕೆ ನೀಡಿದ್ದಾರೆ.
ಇನ್ನೂ ನೋಟಿಸ್ ನೀಡದೇ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಕೇಸ್ ಗಳಲ್ಲಿ ನೋಟಿಸ್ ನೀಡದೆಯೂ ಬಂಧಿಸಬಹುದು ಎಂದು ಹೇಳಿದರು.
ದರ್ಶನ್ ಅವರನ್ನು ನೋಟಿಸ್ ಇಲ್ಲದೆಯೇ ಕರೆಯುವಂತಹ ಅನಿವಾರ್ಯತೆ ಏನಿತ್ತು ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬಂದ ತಕ್ಷಣ ಅದರ ಬಗ್ಗೆ ನಾವು ವಿಚಾರ ಮಾಡುತ್ತೇವೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: