ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ: ನೀಟ್ ರಿಸಲ್ಟ್ ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ನೀಟ್ ಫಲಿತಾಂಶ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಈ ಪರೀಕ್ಷೆ ಸಾಮಾನ್ಯವಲ್ಲ, ಪರೀಕ್ಷೆ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಹಾಗಾಗಿ ನಮಗೆ ಉತ್ತರ ಅಗತ್ಯವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಫಲಿತಾಂಶಕ್ಕೆ ಸಂಬಂಧಿಸಿದಂತೆ ಜುಲೈ 8ರೊಳಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ
ಪರೀಕ್ಷೆ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಹಾಗಾಗಿ ನಮಗೆ ಉತ್ತರ ಅಗತ್ಯವಾಗಿದೆ. ನಿಮಗೆ ಎಷ್ಟು ಸಮಯ ಬೇಕು. ತಕ್ಷಣ ಮರು ಪ್ರಕ್ರಿಯೆ ಆರಂಭಿಸುತ್ತೀರಾ? ಇಲ್ಲದಿದ್ದರೆ ಕೌನ್ಸಲಿಂಗ್ ಶುರುವಾಗುತ್ತದೆ. ನಾನು ಕೌನ್ಸಲಿಂಗ್ಅನ್ನು ನಿಲ್ಲಿಸುವುದಿಲ್ಲ” ಎಂದು ಎನ್‌ಟಿಎ ಪರ ಹಾಜರಿದ್ದ ವಕೀಲರಿಗೆ ನ್ಯಾಯಮೂರ್ತಿಗಳಾದ ಅಮಾನುಲ್ಲಾ ಸೂಚನೆ ನೀಡಿದರು.
ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ವಂಚನೆ ಚಟುವಟಿಕೆಗಳನ್ನು ಕೈಗೊಂಡು ಅನುಕೂಲ ಮಾಡಿಕೊಟ್ಟಿರುವುದು ಅಸಮಾನತೆಯನ್ನು ಶಾಶ್ವತಗೊಳಿಸುತ್ತದೆ. ಹೆಚ್ಚು ವ್ಯಾಸಂಗ ಹಾಗೂ ಮೆರಿಟ್ ಮೇಲೆ ಯಶಸ್ಸುಗಳಿಸುವವರಿಗೆ ಅನಾನುಕೂಲವಾಗುತ್ತದೆ ಹಾಗೂ ಇದು ಸಮಾಜದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಅರ್ಜಿದಾರರು ನ್ಯಾಯಾಧೀಶರಿಗೆ ಮನವರಿಕೆ ಮಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth