SSLC ಉತ್ತೀರ್ಣರಾದವರಿಗೆ ಅಂಚೆ ಇಲಾಖೆಯಲ್ಲಿದೆ 50 ಸಾವಿರಕ್ಕೂ ಅಧಿಕ ಉದ್ಯೋಗ!
ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿದ್ದು, ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಬಳ ಆರಂಭದಲ್ಲಿ 10,000 ರೂ.ಗಳಿಂದ 12,000 ರೂ.ಗಳವರೆಗೆ ಇರುತ್ತದೆ. ಬಡ್ತಿಗಳ ಮೂಲಕ ಉನ್ನತ ಸ್ಥಾನಗಳನ್ನ ತಲುಪಬಹುದು. ಭಾರತೀಯ ಅಂಚೆ ಪಾವತಿ ಬ್ಯಾಂಕ್ ಸೇವೆಗಳ ಮೂಲಕ ಪ್ರೋತ್ಸಾಹಕಗಳನ್ನ ಪಡೆಯಬಹುದು.
ಎಸ್ ಎಸ್ ಎಲ್ ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.
10ನೇ ತರಗತಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ತಮ್ಮ ಪ್ರದೇಶದ ಸುತ್ತಮುತ್ತಲಿನ ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುವ ಅವಕಾಶಕ್ಕೆ ಆಯ್ಕೆ ಮಾಡಬಹುದು. ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳು ಮತ್ತು ಮೀಸಲಾತಿ ನಿಯಮದ ಆಧಾರದ ಮೇಲೆ ಹಂತ ಹಂತವಾಗಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.
ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯ ವಿವರಗಳನ್ನು ಕೂಡ ಇದೇ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: