ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 17,727 ಹುದ್ದೆಗಳಿಗೆ ಬೃಹತ್ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ, ಬೇಗನೆ ಅರ್ಜಿ ಸಲ್ಲಿಸಿ
” ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳುವ ಆಯೋಗ — Staff Selection Commission ವತಿಯಿಂದ ಭಾರತ ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
SSC CGL Recruitment 2024 — ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಖಾಲಿ ಇರುವ ಒಟ್ಟು 17,727 ಹುದ್ದೆಗಳಿಗೆ ಈಗ ನೇಮಕಾತಿ ಆರಂಭವಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ ಮುಖಾಂತರ ಈಗಾಗಲೇ ಆರಂಭವಾಗಿದೆ. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 24 ಜುಲೈ 2024ಕ್ಕೆ ನಿಗದಿಪಡಿಸಲಾಗಿದೆ.
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ಈ ಉದ್ಯೋಗದ ಸಂಕ್ಷಿಪ್ತ ವಿವರ :
* ನೇಮಕಾತಿಯ ಇಲಾಖೆ : ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ
* ನೇಮಕಾತಿಯ ಒಟ್ಟು ಹುದ್ದೆಗಳ ಸಂಖ್ಯೆ : 17,727
* ಉದ್ಯೋಗ ಸ್ಥಳ : All India
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು educational qualification:
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತ ದೇಶದಲ್ಲಿ, ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು.
Age limit – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18ರಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ಒಂದು ವೇಳೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮೀಸಲಾತಿ ವ್ಯಾಪ್ತಿಯಲ್ಲಿದ್ದರೆ, ಅಂತವರಿಗೆ ನಿಯಮಗಳ ಅನುಸಾರ ವಯೋ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ:
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
* ಈ ವರ್ಗಗಳನ್ನು ಹೊರತುಪಡಿಸಿ ಉಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹100/-
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://ssc.gov.in/login
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: