Mysore City Corporation Recruitment 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ಗ್ರೂಪ್ ಡಿ ಹುದ್ದೆಗಳ ಬೃಹತ್ ನೇಮಕಾತಿ : ಆಸಕ್ತರು ಬೇಗ ಅರ್ಜಿ ಸಲ್ಲಿಸಿ
ಮೈಸೂರು ಮಹಾನಗರ ಪಾಲಿಕೆಯಿಂದ ಖಾಲಿ ಇರುವಂತಹ ಗ್ರೂಪ್ ಡಿ ಹುದ್ದೆಗಳಾದ ಪೌರಕಾರ್ಮಿಕರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ತಿಳಿದುಕೊಂಡು ಬೇಗ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಇತರೆ ಮಾಹಿತಿಗಳನ್ನು ಕೆಳಗಿನ ಭಾಗದಿಂದ ತಿಳಿದುಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕ ಜುಲೈ 18ರ ಒಳಗಾಗಿ ಅರ್ಜಿ ಸಲ್ಲಿಸಿ.
Mysore City Corporation Recruitment 2024 – ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 252 ಗ್ರೂಪ್ ಡಿ ಹುದ್ದೆಗಳಾದ ಪೌರಕಾರ್ಮಿಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ :
ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೂ ಕೂಡ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 55 ವರ್ಷದ ಒಳಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕದ ಮಾಹಿತಿ:
ಮೈಸೂರು ಮಹಾನಗರ ಪಾಲಿಕೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಸಿಲ್ಲ. ಆದ್ದರಿಂದ ಅರ್ಜಿ ಸಲ್ಲಿಸುವವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹತೆಯನ್ನು ನೀವು ಹೊಂದಿದ್ದರೆ ಈ ಕೆಳಗಿನ ವಿಳಾಸದಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆ ದೊರೆಯುವ ಸ್ಥಳ :
ಮೈಸೂರು ಮಹಾನಗರ ಕಾರ್ಪೊರೇಷನ್ ಪ್ರಧಾನ ಕಛೇರಿ ಸಯಾಜಿರಾವ್ ರಸ್ತೆ, ಮೈಸೂರು – 570004
ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಮತ್ತು ಆಯುಕ್ತರು, ಮೈಸೂರು ಮಹಾನಗರ ಪಾಲಿಕೆ ಮೈಸೂರು ಕರ್ನಾಟಕ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18 ಜುಲೈ 2024
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: