ಭಾರೀ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ, ತಡೆಗೋಡೆಗಳಲ್ಲಿ ಬಿರುಕು!

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ, ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಪಾಯಕ್ಕೆ ಆಹ್ವಾನಿಸುತ್ತಿದೆ. ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಳೆ ಹೆಚ್ಚಾದ ಬೆನ್ನಲ್ಲೇ ರಸ್ತೆಯಲ್ಲಿನ ಬಿರುಕು ಕುಸಿಯುವ ಭೀತಿ ಸೃಷ್ಠಿಸಿದೆ.
2019ರ ಮಳೆಗೆ ಕುಸಿದಿದ್ದ ಜಾಗದಲ್ಲಿ ನಡೆದಿದ್ದ ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ವಿಭಾಗದ 4–5 ಸ್ಥಳಗಳಲ್ಲಿ ತಡೆಗೋಡೆ ಬಿರುಕು ಕಾಣಿಸಿಕೊಂಡಿದೆ.
100–200 ಅಡಿ ಮಣ್ಣು ತುಂಬಿಸಿ ರಸ್ತೆ ಸಿರ್ಮಿಸಿದ ಜಾಗದಲ್ಲೇ ಬಿರುಕು ಕಾಣಿಸಿಕೊಂಡಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅದ್ವಾನ ಕಂಡು ಸ್ಥಳಿಯರು, ಪ್ರಯಾಣಿಕರಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರಿಗೆ ಅಪಾಯ ಸೃಷ್ಠಿಯಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನ ಆಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎನ್ನುವುದು ಸ್ಥಳೀಯರ ಆರೋಪವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: