10ನೇ ತರಗತಿ ಪಾಸಾದವರಿಗೆ ಉದ್ಯೋಗದ ಸುವರ್ಣಅವಕಾಶ: ಈಗಲೇ ಅರ್ಜಿ ಸಲ್ಲಿಸಿ - Mahanayaka
12:06 AM Thursday 12 - December 2024

10ನೇ ತರಗತಿ ಪಾಸಾದವರಿಗೆ ಉದ್ಯೋಗದ ಸುವರ್ಣಅವಕಾಶ: ಈಗಲೇ ಅರ್ಜಿ ಸಲ್ಲಿಸಿ

job news
05/07/2024

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಮುಖ ಬ್ಯಾಂಕ್ ಆಗಿರುವಂತಹ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಸಹಾಯಕರು, ಚಾಲಕರು ಸೇರಿದಂತೆ ಒಟ್ಟು 215 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಬಾಗಲಕೋಟೆ ಜಿಲ್ಲೆಯ ಈ ಪ್ರಮುಖ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವಂತಹ 215 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ಈ ಲೇಖನವನ್ನು ಕೊನೆಯ ತನಕ ಓದಿರಿ ಹಾಗೂ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

” ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬಾಗಲಕೋಟೆ ” ಸಹಕಾರಿ ಬ್ಯಾಂಕಿನ ಖಾಲಿ ಹುದ್ದೆಗಳ ವಿವರ :

* ಕಿರಿಯ ಸಹಾಯಕ ಹುದ್ದೆಗಳು – 150 ಹುದ್ದೆಗಳು

* ಸಿಪಾಯಿ (ಚಾಲಕ / ಕಾವಲುಗಾರ) – 65 ಹುದ್ದೆಗಳು

ಈ ನೇಮಕಾತಿಗೆ ವಿದ್ಯಾರ್ಹತೆ :

ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಹಾಗೂ ಸಿಪಾಯಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಏಷ್ಟಿರಬೇಕು?

ಕನಿಷ್ಠ 18 ವರ್ಷ ಪೂರೈಸಿದ್ದು ಗರಿಷ್ಠ 35 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗಗಳಲ್ಲಿ ಬರುವ ಅಭ್ಯರ್ಥಿಗಳಿಗೆ ಮೂರರಿಂದ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ:

* ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ – ₹25,248 ರೂಪಾಯಿ ವೇತನ ಸಿಗಲಿದೆ.

* ಸಿಪಾಯಿ ಹುದ್ದೆಗೆ ಆಯ್ಕೆಯಾಗುವರಿಗೆ ಮಾಸಿಕ ₹18,060 ರೂಪಾಯಿ ಸಿಗಲಿದೆ.

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

 ಅರ್ಜಿಯನ್ನು ಸಲ್ಲಿಸುವ ವಿಳಾಸ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಸೆಕ್ಟರ್ ನಂ – 25 ಪ್ಲೇಟ್ ನಂ 52-55 10ನೇ ಮುಖ್ಯ ರಸ್ತೆ ನವನಗರ, ಬಾಗಲಕೋಟ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 3, 2024 ರಿಂದ ಆರಂಭವಾಗಿದೆ. ಬಿಡುಗಡೆಯಾಗಿರುವ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3 ಅಗಸ್ಟ್ 2024 ಆಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ