ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಆ.31ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣವನ್ನು ವೀಕ್ಷಿಸಬಹುದು. ಅಥವಾ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನೂ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: