ಅಪರ್ಣಾ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಖ್ಯಾತ ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಖ್ಯಾತ ನಿರೂಪಕಿ ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಅಪರ್ಣಾ ಅವರ ನಿಧನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಅಪರ್ಣಾ ವಸ್ತಾರೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಇವರಿಗೆ ಕ್ಯಾನ್ಸರ್ 4ನೇ ಹಂತದಲ್ಲಿತ್ತು ಎಂದು ಅಪರ್ಣಾ ಅವರ ಪತಿ ನಾಗರಾಜ ವಸ್ತಾರೆ ಮಾಹಿತಿ ಹಂಚಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: