ಅರವಿಂದ್ ಕೇಜ್ರಿವಾಲ್ ಬಂಧನ ಕಾನೂನುಬದ್ಧವೇ..? ಇಂದು ತೀರ್ಪು ನೀಡುತ್ತಾ ಸುಪ್ರೀಂ ಕೋರ್ಟ್..?
ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17 ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಕೋರ್ಟ್ ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಫೈಲ್ ಗಳನ್ನು ಸಲ್ಲಿಸುವಂತೆ ಇಡಿಗೆ ಸೂಚಿಸಿತ್ತು.
ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಅವರಿಗೆ ಜಾಮೀನು ನಿರಾಕರಿಸಿದ ತೀರ್ಪು ನೀಡಿದ ನಂತರ ಮತ್ತು ಕೇಜ್ರಿವಾಲ್ ಬಂಧನಕ್ಕೆ ಮೊದಲು ದಾಖಲಾದ ಸಾಕ್ಷಿಗಳ ಹೇಳಿಕೆಗಳನ್ನು ನೋಡಲು ನಾವು ಬಯಸುತ್ತೇವೆ ಎಂದಿತ್ತು.
ಹವಾಲಾ ವಹಿವಾಟಿಗೆ ಸಂಬಂಧಿಸಿದಂತೆ ಹೆಚ್ಚಿನ ಪುರಾವೆಗಳು ಕಂಡುಬಂದಿವೆ. ಅಲ್ಲದೇ ವಾಟ್ಸಾಪ್ ಚಾಟ್ ಗಳನ್ನು ಸಹ ಪತ್ತೆಹಚ್ಚಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth