ಭಾರೀ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ
15/07/2024
ದಕ್ಷಿಣ ಕನ್ನಡ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 16ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ರಜೆ ಘೋಷಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರೀ ಗಾಳಿ ಸಹಿತ ಭರ್ಜರಿ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಹಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: