ಯುಪಿ ಉಪಚುನಾವಣೆ: ಎಸ್ಪಿ-ಕಾಂಗ್ರೆಸ್ ಮೈತ್ರಿ ಸ್ಪರ್ಧೆ; ಬಿಜೆಪಿಗೆ ಸೆಡ್ಡು
ಯುಪಿ ವಿಧಾನಸಭಾ ಉಪಚುನಾವಣೆಯಲ್ಲಿ ಎಸ್ಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಲಿದೆ. ಝೀ ನ್ಯೂಸ್ ಮೂಲಗಳ ಪ್ರಕಾರ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಗೆ ಕೆಟ್ಟ ಹೊಡೆತ ನೀಡಿದ್ದು, ಎಸ್ಪಿ-ಕಾಂಗ್ರೆಸ್ ಒಟ್ಟಾಗಿ 43 ಸ್ಥಾನಗಳನ್ನು ಗೆದ್ದರೆ, ಎನ್ ಡಿಎ ಕೇವಲ 36 ಸ್ಥಾನಗಳಿಗೆ ಇಳಿದಿತ್ತು.
ಉತ್ತರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಗಮನಾರ್ಹ ಯಶಸ್ಸಿನ ನಂತರ, ಎನ್ ಡಿಎ ಪಾಲುದಾರರಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಈ ವರ್ಷದ ಕೊನೆಯಲ್ಲಿ ನಡೆಯಲಿರುವ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸೀಟು ಹಂಚಿಕೆ ವ್ಯವಸ್ಥೆ ಕುರಿತು ಚರ್ಚೆಗಳನ್ನು ಪ್ರಾರಂಭಿಸಿವೆ.
ವಿರೋಧ ಬಣದ ಭಾಗವಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಪಕ್ಷಗಳು ಉಪಚುನಾವಣೆಯಲ್ಲಿ ಮಿತ್ರಪಕ್ಷಗಳಾಗಿ ಸ್ಪರ್ಧಿಸುವ ಉದ್ದೇಶವನ್ನು ದೃಢಪಡಿಸಿವೆ. ಆದರೆ ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯನ್ನು ಅವರು ಇನ್ನೂ ನಿರ್ಧರಿಸಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth