SSLC ಹಾಗೂ PUC ಪಾಸಾದವರಿಗೆ ಉದ್ಯೋಗಾವಕಾಶ
ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯ, ಬೆಳಗಾವಿ ಜಿಲ್ಲೆಯ ವಿವಿಧ ವ್ಯಾಪ್ತಿಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 313 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 4ನೇ ತಾರೀಕಿನ ತನಕ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳ ಮಾಹಿತಿ, ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಲಿಂಕ್ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನೀಡಲಾಗಿದೆ.
ನೇಮಕಾತಿ ವಿವರ :
* ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ / ಸಂಸ್ಥೆ : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
* ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
* ಹುದ್ದೆಗಳ ಸಂಖ್ಯೆ : 313
* ಉದ್ಯೋಗ ಸ್ಥಳ : ಬೆಳಗಾವಿ
ಹುದ್ದೆಗಳ ವಿಂಗಡಣೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 61
* ಅಂಗನವಾಡಿ ಸಹಾಯಕಿ ಹುದ್ದೆಗಳು – 252
ಶೈಕ್ಷಣಿಕ ಅರ್ಹತೆಗಳು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು ಈ ಕೆಳಗಿನಂತೆ ವಿದ್ಯಾರ್ಹತೆಗಳನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಬೋರ್ಡ್ ನಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ/ Age limit – ( ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ )
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದ ವಯೋಮಿತಿಯಲ್ಲಿರುವಂತವರು ಮಾತ್ರ ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಆಗಿ ಆಯ್ಕೆಯಾಗುವವರಿಗೆ ಸಿಗುವ ವೇತನ : ಹುದ್ದೆಗಳಿಗೆ ಅನುಗುಣವಾಗಿ 11,000 ರೂ. ವರೆಗೆ ಮಾಸಿಕ ವೇದನೆ ಸಿಗಲಿದೆ.
ನೇಮಕಾತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಗಳು :
* ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ – 10 ಜುಲೈ 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 04 ಆಗಸ್ಟ್ 2024
ಅರ್ಜಿ ಸಲ್ಲಿಸುವ ನೇರ ಲಿಂಕ್ : https://karnemakaone.kar.nic.in/abcd/ApplicationForm_JA_org.aspx